ದೆಹಲಿ : ಚಿನ್ನ, ಬೆಳ್ಳಿ ಬೆಲೆಗಳ ಕುಸಿತ ಶುಕ್ರವಾರವೂ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್ಗೆ 190 ರೂ ಕಡಿಮೆಗೊಂಡರೆ, ಬೆಳ್ಳಿ ಬೆಲೆ 25 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 14,155 ರೂನಿಂದ 13,965 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 15,235 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ 300 ರೂನಿಂದ 275 ರೂಗೆ ಇಳಿದಿದೆ. ಚೆನ್ನೈ ಹಾಗೂ ಕೆಲವೆಡೆ ಬೆಲೆ 280ಕ್ಕೆ ಇಳಿದಿದೆ. ಬೆಂಗಳೂರು, ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಗೊಂಡಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಕಂಡಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,39,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,350 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,39,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 6ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,426 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ ಆಗಿದೆ.

0 Comments