ಕಾಸರಗೋಡು : ಕಾಳ್ಯಂಗಾಡು ಶ್ರೀ ಮೂಕಾಂಬಿಕಾ ಕ್ಷೇತ್ರದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಇದೇ ಬರುವ ಎಪ್ರಿಲ್ 26 ರಿಂದ ಮೇ 2ನೇ ತಾರೀಕುಗಳಲ್ಲಿ ಜರಗಲಿದೆ. ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಎಡನೀರು ಮಠಕ್ಕೆ ತೆರಳಿ ಎಡನೀರು ಸಂಸ್ಥಾನದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರಿಗೆ ನೀಡಿ ಆಶೀರ್ವಾದ, ಮಂತ್ರಾಕ್ಷತೆ ಪಡೆದು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ| ಕೆ.ಎನ್. ವೆಂಕಟ್ರಮಣ ಹೊಳ್ಳ, ಉಪಾಧ್ಯಕ್ಷ ಚೇತನ್ ಕಾಳ್ಯಂಗಾಡು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೋಹನ್‌ರಾಜ್ ಕಾಳ್ಯಂಗಾಡು, ಪ್ರಧಾನ ಕಾರ್ಯದರ್ಶಿ ದಯಾನಂದ ಕೊಳ್ಕೆಬೈಲ್, ಕಾರ್ಯದರ್ಶಿಗಳಾದ ರಂಜಿತ್ ಮನ್ನಿಪ್ಪಾಡಿ, ಗೋವಿಂದ ಕಾಳ್ಯಂಗಾಡು ಕ್ಷೇತ್ರ ಬ್ರಹ್ಮದರ್ಶಿ ನಾರಾಯಣ ಕಾಳ್ಯಂಗಾಡು ಉಪಸ್ಥಿತರಿದ್ದರು.

0 Comments