ಸೈಂಟ್ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆ ಪಳ್ನೀರು ಮಂಗಳೂರು ಇಲ್ಲಿನ ಸಭಾಂಗಣದಲ್ಲಿ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿ 'ಕನ್ನಡದ ನಡಿಗೆ ಶಾಲೆಯ ಕಡೆಗೆ' ಏಕದಿನ ಸಾಹಿತ್ಯ ಅಭಿಯಾನ ಜರಗಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ದೀಪ ಬೆಳಗಿಸಿ ಉದ್ಘಾಟನೆಗೈದರು. ದಕ್ಷಿಣ ಕನ್ನಡ ಜಿಲ್ಲಾ ಘಟಕ ಕಾರ್ಯಾಧ್ಯಕ್ಷ ಉಮೇಶ್ ರಾವ್ ಕುಂಬಳೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕನ್ನಡ ಭವನ ಮತ್ತು ಗ್ರಂಥಾಲಯ ಕಾಸರಗೋಡು, ಇದರ ಸ್ಥಾಪಕ ಅಧ್ಯಕ್ಷರು ಡಾ. ವಾಮನ್ ರಾವ್ ಬೇಕಲ್ ಕನ್ನಡ ಸಾಹಿತ್ಯದ ಬಗ್ಗೆ ಒಲವು, ಆಸಕ್ತಿ ಮೂಡಲು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿದರು. ಕನ್ನಡ ಭವನ ಕಾಸರಗೋಡು ಸಂಚಾಲಕರು, ಸ್ಥಾಪಕರೂ ಆದ ಸಂಧ್ಯಾ ರಾಣಿ ಟೀಚರ್ ಉಪಸ್ಥಿತರಿದ್ದರು. ಸುಮಾರು 35 ರಷ್ಟು ವಿದ್ಯಾರ್ಥಿಗಳು ಕವನವಾಚನ , ರಸಪ್ರಶ್ನೆಯಲ್ಲಿ ಭಾಗವಹಿಸಿದ್ದರು. ಕವನ ವಾಚನಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಸಿಂತಿಯ ಡಿಸೋಜಾ ಹಾಗೂ ಶಿಕ್ಷಕಿ ಲವೀನ ಅನಿಟ ಡಿಸೋಜಾ ಇವರನ್ನು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಗೌರವಿಸಲಾಯಿತು. ದ. ಕ. ಜಿಲ್ಲಾಧ್ಯಕ್ಷೆ, ಶಿಕ್ಷಕಿ ರೇಖಾ ಸುದೇಶ್ ರಾವ್ ಸ್ವಾಗತಿಸಿ, ಶಿಕ್ಷಕಿ ಶ್ರೀಲಕ್ಷ್ಮಿ ಕೀಕಾನ ವಂದಿಸಿದರು. ಶಿಕ್ಷಕಿ ಲವೀನ ಅನಿಟ ಡಿಸೋಜಾ ನಿರೂಪಿಸಿದರು. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

0 Comments