Ticker

6/recent/ticker-posts

Ad Code

ವಿಧಾನಸಭಾ ಚುನಾವಣೆ ಬಿಜೆಪಿಯ ಶಕ್ತಿ ಪ್ರದರ್ಶನವಾಗಲಿದೆ : ನಳಿನ್ ಕುಮಾರ್ ಕಟೀಲು


ಕಾಸರಗೋಡು: ಕಾಸರಗೋಡು ಮತ್ತು ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಖಚಿತ ಪಡಿಸಲು ಬಿಜೆಪಿ ಚುನಾವಣಾ ಪೂರ್ವ ಸಿದ್ಧತೆ ಪ್ರಾರಂಭಿಸಿದೆ. ಕಾಸರಗೋಡಿನ ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಮಂದಿರದಲ್ಲಿ ಜಿಲ್ಲಾ ಪದಾಧಿಕಾರಿಗಳ ಮತ್ತು ಪಂಚಾಯತ್, ವಲಯ ಪದಾಧಿಕಾರಿಗಳ ಸಮಾಲೋಚನಾ ಸಭೆ ನಡೆಯಿತು. ಸಭೆಯನ್ನು ಕರ್ನಾಟಕ ಮಾಜಿ ರಾಜ್ಯಾಧ್ಯಕ್ಷ ಹಾಗೂ ದ. ಕ ಸಂಸದರಾಗಿದ್ದ ನಳಿನ್ ಕುಮಾರ್ ಕಟೀಲು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕೇರಳದಲ್ಲಿ ಬಿಜೆಪಿಗೆ ಜಾಗವಿಲ್ಲ ಎನ್ನುತ್ತಿದ್ದ ಮಾತುಗಳೆಲ್ಲಾ ಸುಳ್ಳಾಗುತ್ತಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಬಿಜೆಪಿಯ ಶಕ್ತಿಯನ್ನು ಪ್ರಕಟಿಸಲಿದೆ ಎಂದರು. ಸಭೆಯಲ್ಲಿ ಚುನಾವಣೆಯನ್ನು ಎದುರಿಸಿ ಫಲಿತಾಂಶ ಪಡೆಯಬೇಕಾದ ಕಾರ್ಯತಂತ್ರಗಳ ಚಟುವಟಿಕೆ ಕುರಿತು ಸಮಾಲೋಚನೆ ನಡೆಯಿತು. ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ. ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಕೋಝಿಕ್ಕೋಡ್ ವಲಯ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್, ಕೋಝಿಕ್ಕೋಡ್ ವಲಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಿ. ಕಾಶೀನಾಥ್, ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ರಾಜ್ಯ ಸಮಿತಿ ಸದಸ್ಯ ವಿ. ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ಎ. ವೇಲಾಯುಧನ್, ಕಾಸರಗೋಡು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಆರ್. ಸುನಿಲ್, ಮನುಲಾಲ್ ಮೇಲತ್, ವಿಜಯಕುಮಾರ ರೈ ಮೊದಲಾದವರು ಮಾತನಾಡಿದರು.

Post a Comment

0 Comments