Ticker

6/recent/ticker-posts

Ad Code

ಮೈಸೂರಿನಲ್ಲಿ ಕೇರಳ ಲಾಟರಿ ಮಾರಾಟ : ಇಬ್ಬರ ಸೆರೆ

ಮೈಸೂರು : ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು  ಮೈಸೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದ ಜಾಲವನ್ನು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಿಶೇಷ ತಂಡ ಯಶಸ್ವಿಯಾಗಿ ಭೇದಿಸಿದೆ. ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಅರುಣ್ ಕುಮಾರ್ ಮತ್ತು ಸ್ವಾಮಿ ಎಂಬ ಇಬ್ಬರನ್ನು ಬಂಧಿಸಲಾಗಿದ್ದು, ₹55,200 ಮೌಲ್ಯದ ಲಾಟರಿ ಟಿಕೆಟ್‌ಗಳು ಹಾಗೂ ₹22,930 ನಗದು ಸೇರಿದಂತೆ ಒಟ್ಟು 78,130 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕರ್ನಾಟಕದಲ್ಲಿ ಲಾಟರಿ ಮಾರಾಟ ನಿಷಿದ್ಧವಾಗಿದ್ದರೂ, ಗಡಿ ಮೂಲಕ ಅಕ್ರಮ ದಂಧೆ ನಡೆಯುತ್ತಿದೆ ಎನ್ನಲಾಗಿದೆ.

Post a Comment

0 Comments