Ticker

6/recent/ticker-posts

Ad Code

ಕುಳೂರು ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ‌ ಬಿಡುಗಡೆ

 

ಮಂಜೇಶ್ವರ :  ಶತಮಾನೋತ್ಸವವನ್ನು ಕಂಡು ಇದೀಗ 102 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಕುಳೂರಿನ‌ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ‌ ಬಿಡುಗಡೆ ಕಾರ್ಯಕ್ರಮ  ಶಾಲೆಯಲ್ಲಿ ನಡೆಯಿತು.

ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ‌ಮೊಹಮ್ಮದ್ ಹಾಜಿ ಕಂಚಿಲ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಯುವ ಉದ್ಯಮಿಯಾಗಿರುವ ಮೋಹನ್ ಶೆಟ್ಟಿ ಮಜ್ಜಾರ್  ಮುಖ್ಯ ಅತಿಥಿಯಾಗಿದ್ದರು.  ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣ ನೈಕ್ ನಡುಹಿತ್ಲು, ಶಾಲಾ ಹಳೆ ವಿದ್ಯಾರ್ಥಿ ಸಂಘದ ಪ್ರಮುಖರಾದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಶೇಖ್ ಅಬ್ದುಲ್ ಮಜೀದ್ ಚಾರ್ಲ,  ಶಾಲಾ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಸತೀಶ್ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ಅಧ್ಯಕ್ಷೆ ಪ್ರಿಯಾಂಕ ಕೇಮಜಾಲು, ಸದಸ್ಯರಾದ ಶ್ವೇತ ಕೇಮಜಾಲು, ಶಾಲಾ ನಾಯಕ ಉಲ್ಲಾಸ್, ಶಾಲಾ‌ ಉಪನಾಯಕಿ ಕುಮಾರಿ ವೀಕ್ಷಿತ ಹಾಗೂ ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು. 

 ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು. ಶಾಲಾ ವಾರ್ಷಿಕೋತ್ಸವವು ಫೆಬ್ರವರಿ 18 ರಂದು ನಡೆಯಲಿದ್ದು ಕಾರ್ಯಕ್ರಮದ ಯಶಸ್ವಿಗೆ ಕರೆ ನೀಡಲಾಯಿತು.

Post a Comment

0 Comments