ಉಪ್ಪಳ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಚುನಾವಣಾ ಪ್ರಚಾರಕ್ಕೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರು ಮಂಗಲ್ಪಾಡಿ ಸೋಂಕಲ್‌ನಲ್ಲಿ ಗೋಡೆಬರಹ ಬರೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ಪಕ್ಷದ ವಲಯ ಉಪಾಧ್ಯಕ್ಷ ವಿಜಯ ಕುಮಾರ್ ರೈ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ, ಕುಂಬಳೆ ಮಂಡಲ ಅಧ್ಯಕ್ಷ ಸುನಿಲ್ ಅನಂತಪುರಂ, ಮತ್ತು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ವಲ್ಸರಾಜ್ ಕೆ.ಪಿ ಉಪಸ್ಥಿತರಿದ್ದರು.

0 Comments