ಮಂಗಳೂರು : ಪಿಲಿಕುಳ ಮೃಗಾಲಯ ಬಂದ್ ಗೆ ಹೈಕೋರ್ಟ್ ಆದೇಶ ಕೊಟ್ಟಿದೆ ಎಂದು ನಿನ್ನೆ ಸುದ್ದಿ ಹರಡಿದ್ದು ಈ ಬಗ್ಗೆ ಹೈಕೋರ್ಟ್ ಆದೇಶ ಕೊಟ್ಟಿರುವುದು ತಮಗೆ ಗೊತ್ತಿಲ್ಲ. ಅಂತಹ ಯಾವುದೇ ಆದೇಶ ತಮಗೆ ಬಂದಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಮಾಹಿತಿ ನೀಡಿದರು. ಪಿಲಿಕುಳದಲ್ಲಿ ಪ್ರಾಣಿಗಳ ಸಂಖ್ಯೆ ಜಾಸ್ತಿಯಾಗುತ್ತಿದೆ. ಇದರ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಬಿಟ್ಟು ಕೊಡುವ ಪ್ರಸ್ತಾವನೆ ಅರಣ್ಯ ಇಲಾಖೆ ನಿರ್ವಹಣೆಗೆ ಒಪ್ಪಿಕೊಂಡಿದ್ದಾರೆ. ಅವರಿಗೆ ಹಸ್ತಾಂತರಿಸುವ ಮೊದಲು ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಮುಂದಿನ ವಿಚಾರದಲ್ಲಿ ಈ ಬಗ್ಗೆ ಡಿಎಫ್‌ಒ ಅವರೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.

0 Comments