Ticker

6/recent/ticker-posts

Ad Code

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ

ಹೈದರಾಬಾದ್: ತಿಂಡಿ ಆಸೆ ತೋರಿಸಿ 3  ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಕ್ರೂರ ಘಟನೆ ಆಂಧ್ರಪ್ರದೇಶದ  ವಿಶಾಖಪಟ್ಟಣದಲ್ಲಿ ನಡೆದಿದೆ. ಈ ಪ್ರಕರಣದ ಆರೋಪಿಯಾದ 19 ವರ್ಷದ ಯುವಕನನ್ನು ಬಂಧಿಸಲಾಗಿದೆ. ಆಕೆಯ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದು ಬಂದಿದ್ದು , ಆರೋಪಿಯು ಮಗುವಿಗೆ ತಿಂಡಿ ಕೊಡಿಸುವ ಆಸೆ ತೋರಿಸಿ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾನೆ. ಆನಂತರ ಬಾಲಕಿ ಅಳುವುದನ್ನು ಕಂಡು ತಾಯಿ ಕೇಳಿದಾಗ ಕೃತ್ಯ ಬೆಳಕಿಗೆ ಬಂದಿದೆ. ಈ ಸಂಬಂಧ ತಾಯಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶ ರಾಜ್ಯ ಮಹಿಳಾ ಆಯೋಗವು ಘಟನೆಯ ಬಗ್ಗೆ ಗಂಭೀರ ಕಳಂಕ ಮತ್ತು ಆಕ್ರೋಶ ವ್ಯಕ್ತಪಡಿಸಿದೆ. ಅಧ್ಯಕ್ಷೆ ರಾಯಪತಿ ಶೈಲಜಾ ವಿಶಾಖಪಟ್ಟಣ ನಗರ ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ತಕ್ಕ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Post a Comment

0 Comments