Ticker

6/recent/ticker-posts

Ad Code

ಕಾಲು ನೋವಿನಿಂದ ಬಳಲುತ್ತಿದ್ದ ಬಾಲಕಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ

ವಿಟ್ಲ : ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಬಳಿಯ ವಿದ್ಯಾಸಂಸ್ಥೆಯೊಂದರ ವಿದ್ಯಾರ್ಥಿನಿಯೊಬ್ಬಳ ಮೃತದೇಹ ಅಲ್ಲಿಯ ಕೆರೆಯಲ್ಲಿ ಸೋಮವಾರ ಪತ್ತೆಯಾಗಿದೆ. ವಿದ್ಯಾಸಂಸ್ಥೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಳು. ಸ್ಥಳೀಯರು, ವಿದ್ಯಾಸಂಸ್ಥೆಯವರು ಸೇರಿ ಸೋಮವಾರ ಬೆಳಿಗ್ಗೆವರೆಗೂ ಆಕೆಗಾಗಿ ಹುಡುಕಾಟ ನಡೆಸಿದ್ದರು. ಎಲ್ಲೂ ಆಕೆಯ ಸುಳಿವು ಸಿಕ್ಕಿರಲಿಲ್ಲ. ಬಳಿಕ ವಿದ್ಯಾಸಂಸ್ಥೆಯ  ಗೋಶಾಲೆ ಮುಂಭಾಗದ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ನಾಪತ್ತೆಯಾದ ದಿನವೇ ತರಗತಿ ಕೊಠಡಿಯಲ್ಲಿ ಆಕೆ ಬರೆದದ್ದು ಎನ್ನಲಾದ ಡೆತ್ ನೋಟ್ ಪತ್ತೆಯಾಗಿದೆ. ‘ನಾನು ಸಾಯುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣವಲ್ಲ’ ಎಂದು ಅದರಲ್ಲಿ ಬರೆಯಲಾಗಿದೆ. ಹಾಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿನಿ ಬೆಂಗಳೂರಿನವಳಾಗಿದ್ದು, ಆಕೆಯ ತಂದೆಯು ಆಕೆ ಕಲಿಯುತ್ತಿದ್ದ ವಿದ್ಯಾಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದಾರೆ. ಅವರ ಕುಟುಂಬವೂ ಕೊಡಂಗಾಯಿಯಲ್ಲೇ ವಾಸವಾಗಿದೆ. ವಿದ್ಯಾರ್ಥಿನಿ ಕಾಲು ನೋವಿನಿಂದ ಬಳಲುತ್ತಿದ್ದು, ಕೆಲವು ದಿನಗಳ ಹಿಂದೆ ಆಸ್ಪತ್ರೆಗೆ ಹೋಗಿ ಬಂದಿದ್ದಳು ಎಂದು ಗೊತ್ತಾಗಿದೆ.
ವಿಟ್ಲ ಠಾಣೆಯ ಇನ್‌ಸ್ಪೆಕ್ಟರ್‌ ಪ್ರಕಾಶ್ ದೇವಾಡಿಗ, ಪಿಎಸ್ಐ ಜಿ.ರಾಮಕೃಷ್ಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಮುರಳೀಧರ ವಿಟ್ಲ ನೇತೃತ್ವದ ಫ್ರೆಂಡ್ಸ್ ವಿಟ್ಲ ತಂಡದ ಕಾರ್ಯಕರ್ತರು ಕೆರೆಯಲ್ಲಿದ್ದ ವಿದ್ಯಾರ್ಥಿನಿಯ ಮೃತದೇಹವನ್ನು ಮೇಲಕ್ಕೆತ್ತಿದ್ದರು.

Post a Comment

0 Comments