ಬಳ್ಳಾರಿ: ಕೇರಳದಿಂದ ಹಂಪಿಗೆ ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಟೂರಿಸ್ಟ್ ಮಿನಿ ಬಸ್ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ನಡೆದಿದೆ. ತ್ರಿಶೂರ್ ಜಿಲ್ಲೆಯ ಶ್ರೀಕೃಷ್ಣ ಕಾಲೇಜು ವಿದ್ಯಾರ್ಥಿಗಳಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಲ್ಟಿಯಾಗಿ, 7 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಶಿಕ್ಷಕಿ ಡಾ.ರಶ್ಮಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments