ಹಾವೇರಿ: ಫೀಸ್ ಕಟ್ಟಿಲ್ಲವೆಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ ಘಟನೆಯೊಂದು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ನಡೆದಿದೆ. ಇಲ್ಲಿನ ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ರಾಣೆಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿಗೆ ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ಶುಲ್ಕ ಕಟ್ಟಿಲ್ಲವೆಂದು ಪರೀಕ್ಷೆ ಬರೆಯಲು ಬಿಡದೇ ಸತಾಯಿಸಿದ್ದಾರೆ. 30 ಸಾವಿರ ರೂ. ಶುಲ್ಕ ಕಟ್ಟಲು ಬಾಕಿಯಿದೆಯೆಂದು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಆದರೂ ವಿದ್ಯಾರ್ಥಿನಿ ಇಂದು (ಫೆ.28) ಕನ್ನಡ ಪರೀಕ್ಷೆ ಬರೆಯಲು ಬಂದಿದ್ದಳು. ಈ ವೇಳೆ ಶಿಕ್ಷಕಿ ಸುನೀತಾ ವಿದ್ಯಾರ್ಥಿನಿ ಸಾರಾಳನ್ನು ತಡೆಡಿದ್ದು ಪರೀಕ್ಷೆ ಬರೆಯಲಾಗದೇ ವಿದ್ಯಾರ್ಥಿನಿ ಪರದಾಡುವಂತಾಗಿದೆ. ಈ ವೇಳೆ ವಿದ್ಯಾರ್ಥಿನಿ ಸಾರಾಗೆ ಹಾಲ್ ಟಿಕೆಟ್ ನೀಡುವಂತೆ ಸಾಮಾಜಿಕ ಹೋರಾಟಗಾರ ಹನುಮಂತಪ್ಪ ಎಂಬವರು ಪ್ರತಿಕ್ರಿಯಿಸಿದ್ದು, ವಿದ್ಯಾರ್ಥಿನಿ ಭವಿಷ್ಯ ಹಾಳು ಮಾಡ್ತಿದ್ದೀರಿ ಎಂದು ಕಿಡಿಕಾರಿದ್ದಾರೆ. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಪೀಸ್ ಕಟ್ಟುವವರೆಗೂ ಅವರ ಬೈಕ್ ಅಡಮಾನ ಇಟ್ಟುಕೊಂಡು ನಂತರ ಹಾಲ್ ಟಿಕೆಟ್ ನೀಡಿದೆ.
ಘಟನೆಯ ವಿವರ ತಿಳಿದು ರಾಣೇಬೆನ್ನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶ್ಯಾಮ ಸುಂದರ್ ಅಡಿಗಾ ಅವರು ಈ ಕುರಿತು ಕಾರಣ ಕೇಳಿ ನೋಟಿಸ್ ಕೊಡುವುದಾಗಿ ತಿಳಿಸಿದ್ದಾರೆ.

0 Comments