ಮೈಸೂರು : ಒಣಗಿದ ದಾಸವಾಳ ಹೂ ನುಂಗಿ ಉಸಿರುಗಟ್ಟಿ ಆರು ತಿಂಗಳ ಮಗುವೊಂದು ಸಾವನ್ನಪ್ಪಿದ ದಾರುಣ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಮನೆಯ ಹೊಸಲಿನಲ್ಲಿ ಪೂಜೆಗೆ ಇರಿಸಿದ್ದ ದಾಸವಾಳದ ಹೂವನ್ನು ನುಂಗಿದ ಪರಿಣಾಮ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ. ದೊಡ್ಡಹೆಜ್ಜೂರಿನ ಸುದರ್ಶನ್-ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಸಾವನ್ನಪ್ಪಿದ ಮಗು.
ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ ಚಿನ್ಮಿಯಿಗೌಡ, ಮನೆಯ ಹೊಸಲಿಗೆ ಪೂಜೆಗೆ ಇಟ್ಟಿದ್ದ ದಾಸವಾಳದ ಹೂವಿನ ತುಂಡನ್ನು ಬಾಯಿಗೆ ಹಾಕಿಕೊಂಡಿದೆ. ಈ ವೇಳೆ ಅಣ್ಣ ಕಿತ್ತುಕೊಳ್ಳುತ್ತಾನೆಂದು ಒಣಗಿದ ಹೂವನ್ನು ಮಗು ನುಂಗಿದ್ದರಿಂದ ಉಸಿರಾಟದ ತೊಂದರೆಯಾಗಿ ಅಸ್ವಸ್ಥಗೊಂಡಿದೆ. ತಕ್ಷಣವೇ ಹನಗೋಡಿನ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.

0 Comments