ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲೊಂದರಲ್ಲಿ ಈ ಘಟನೆ ನಡೆದಿದ್ದು, ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಬಾಲಕನ ಪೋಷಕರ ಅಕ್ರಂದನ ಮುಗಿಲು ಮುಟ್ಟಿದ್ದು, ಡ್ರಗ್ ಅಡಿಕ್ಟ್ ಆಗಿ ಕೊಲೆ ಮಾಡಿರಬಹುದು, ಇದಕ್ಕೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

0 Comments