Ticker

6/recent/ticker-posts

Ad Code

ವಿವಾಹಿತರಾದ 15 ದಿನದಲ್ಲಿಯೇ ವಾಹನ ಅಪಘಾತಕ್ಕೊಳಗಾಗಿ ನವದಂಪತಿಗಳು ಸ್ಥಳದಲ್ಲೇ ಸಾವು

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ನಡೆದಿದೆ.

ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕಾರ್ತಿಕ್ ಹೂಗಾರ (34),  ಐಶ್ವರ್ಯ (30) ಎಂದು ಗುರುತಿಸಲಾಗಿದ್ದು, ಹಾವೇರಿ ನಗರದ ನಿವಾಸಿಗಳಾಗಿದ್ದಾರೆ. ಇವರ ಮದುವೆಯಾಗಿ ಕೇವಲ 15 ದಿನಗಳಷ್ಟೇ ಆಗಿತ್ತು. ನಿನ್ನೆ ದೇವರ ದರ್ಶನಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.  ಸ್ಥಳಕ್ಕೆ ತಡಸ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post a Comment

0 Comments