ಅಮರಾವತಿ : ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ. ವಿಧಾನಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು, 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ಬಗ್ಗೆ ಬಂದಿರುವ ಸಲಹೆಗಳನ್ನು ನಾವು ಸ್ವೀಕರಿಸಿದ್ದೇವೆ. ಖಂಡಿತವಾಗಿಯೂ, ಮುಂಬರುವ 90 ದಿನಗಳಲ್ಲಿ ಇದನ್ನೂ ನಾವು ಜಾರಿಗೆ ತರುತ್ತೇವೆ ಎಂದಿದ್ದಾರೆ. ಸಾಮಾಜಿಕ ಜಾಲತಾಣ ನಿಷೇಧ 13 ವರ್ಷ ಅಥವಾ 16 ವರ್ಷವಾಗಿರಬೇಕೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲರೂ ಒಪ್ಪಿದರೆ, ಈ ಬಗ್ಗೆ ನಾವು ನಿರ್ಧರಿಸುತ್ತೇವೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

0 Comments