ಕಾಸರಗೋಡು : ಮೊಗ್ರಾಲ್ ಪುತ್ತೂರಿನ ಬಿಎಲ್ ಒ ಸವದ್ (32) ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ಡೆತ್ ನೋಟ್ ಪತ್ತೆಯಾಗಿದೆ. ಶನಿವಾರ ಬೆಳಿಗ್ಗೆ 7:30 ರ ಸುಮಾರಿಗೆ ಮೊಗ್ರಾಲ್ ನದಿಯಲ್ಲಿ ಸವದ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಪ್ರಾಣ ಉಳಿಸಲಾಗಿಲ್ಲ. ಚೆರ್ಕಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಇವರು ಕಾಸರಗೋಡು ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯ ಬೂತ್ ಸಂಖ್ಯೆ 1 ರ ಬಿಎಲ್‌ಒ. ಒಬ್ಬ ಅತ್ಯುತ್ತಮ ಅಧಿಕಾರಿ ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಹೇಳಿದ್ದಾರೆ. ಸವದ್ ಅವರ ಸೇವೆ ಅತ್ಯುತ್ತಮವಾಗಿತ್ತು ಎಂದು ತಹಶೀಲ್ದಾರ್ ವರದಿ ಮಾಡಿದ್ದಾರೆ. ಅವರ ಸಾವಿಗೆ ಸಂಬಂಧಿಸಿದಂತೆ ಪೊಲೀಸರು ಆತ್ಮಹತ್ಯಾ ಪತ್ರವನ್ನು ಕಂಡುಕೊಂಡಿದ್ದಾರೆ. ಆತ್ಮಹತ್ಯೆ ಸಂಪೂರ್ಣವಾಗಿ ವೈಯಕ್ತಿಕ ಕಾರಣಗಳಿಂದಾಗಿದೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಪೋಲಿಸರು ಸಮಗ್ರ ತನಿಖೆಗೆ ಮುಂದಾಗಿದ್ದಾರೆ.

0 Comments