Ticker

6/recent/ticker-posts

Ad Code

ಕಾರಿಗೆ ಕಂಟೈನರ್ ಲಾರಿ ಡಿಕ್ಕಿ: ಕಾಸರಗೋಡಿನ ಕಿನ್ನಿಂಗಾರು ನಿವಾಸಿ ಮೃತ್ಯು


 ಸುಳ್ಯ: ತಾಲೂಕಿನ ಅಡ್ಡಾರು ಸಮೀಪದ ಬೋಳುಬೈಲಿನಲ್ಲಿ ಮಂಗಳವಾರ ಸಂಜೆ  ಕಾರು ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಕಾಸರಗೋಡಿನ ಬೆಳ್ಳೂರು ಪಂಚಾಯತಿನ  ನೆಟ್ಟಣಿಗೆ ಗ್ರಾಮದ ಕಿನ್ನಿಂಗಾರಿನ ಸತೀಶ್ ಕೆ.(45) ಮೃತ ವ್ಯಕ್ತಿ. ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಬೊಳುಬೈಲು ಎಂಬಲ್ಲಿ ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಂಟೈನರ್ ಪಲ್ಟಿಯಾಗಿ, ಕಾರು ಚಾಲಕ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟರು. ಮೃತರು ಮಡಿಕೇರಿಯಲ್ಲಿ ಪಿಟ್ಟರ್ ಆಗಿ ಕೆಲಸ ನಿರ್ವಹಿಸುವವರಾಗಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Post a Comment

0 Comments