ಕಾಸರಗೋಡು : ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಕೇಂದ್ರ ಸೇನೆಯ ಎರಡು ತುಕಡಿಗಳನ್ನು ನಿಯೋಜಿಸಲಾಗಿದೆ. ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಾಷಾ ಸಮಸ್ಯೆ ಇರುವ ಸ್ಥಳಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಸರ್ಕಾರಿ ಪ್ರಕಟಣೆಗಳು ಮತ್ತು ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಬೇಕೆಂದು ಸಭೆ ಒತ್ತಾಯಿಸಿದ್ದು, ಈ ವಿಷಯವನ್ನು ಚುನಾವಣಾ ಆಯೋಗಕ್ಕೆ ವರದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

0 Comments