Ticker

6/recent/ticker-posts

Ad Code

ಬಿಜೆಪಿಯಿಂದ ಚುನಾವಣಾ ಸಿದ್ಧತಾ ಕಾರ್ಯಾಗಾರ

 

ಕಾಸರಗೋಡು : ವಿಧಾನಸಭಾ ಚುನಾವಣಾ ಸಿದ್ಧತೆಯ ಅಂಗವಾಗಿ ಬಿಜೆಪಿ ಕಾಸರಗೋಡು ಮಂಡಲ ಸಮಿತಿಯು ಡಾ.ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಕಾರ್ಯಾಗಾರವನ್ನು ನಡೆಸಿತು. ಕಾಸರಗೋಡು ಕ್ಷೇತ್ರದ ಚುನಾವಣಾ ಚಟುವಟಿಕೆಗಳ ಉಸ್ತುವಾರಿ ವಹಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೋಝಿಕ್ಕೋಡ್ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷೆ ಎಂ.ಎಲ್.ಅಶ್ವಿನಿ, ಜಯಪ್ರಕಾಶ್, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರನ್ ಕುದುರೆಪ್ಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ, ಶ್ರೀಧರ ಕೂಡ್ಲು ಮೊದಲಾದವರು ಮಾತನಾಡಿದರು.

Post a Comment

0 Comments