ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 7ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ ಮಾಡಲು ಪೊಲೀಸರು ಕೂಡ ಕೈಜೋಡಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ.

0 Comments