ಮಡಿಕೇರಿ : ಮನೆಯೊಳಗಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮಾಜಿ ಸಿಆರ್‌ಪಿಎಫ್ ಯೋಧ ಸಾವಿಗೀಡಾದ ಘಟನೆ ಮಡಿಕೇರಿಯ ತೋಳುರು ಶೆಟ್ಟಳ್ಳಿ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಹೆಚ್.ಎ.ವೆಂಕಟೇಶ್(64) ಎಂದು ಗುರುತಿಸಲಾಗಿದೆ. ತೋಟದ ಯಂತ್ರಗಳ ಬಳಕೆಗೆ ತಂದಿಟ್ಟಿದ್ದ ಪೆಟ್ರೋಲ್‍ಗೆ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು. ಈ ವೇಳೆ ಬೆಂಕಿಯ ಕೆನ್ನಾಲಿಗೆಯಿಂದ ಹೊರ ಬರಲಾಗದೆ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮನೆಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಮನೆ ಬಳಿ ಬಂದು ನೋಡಿ, ಬೆಂಕಿ ನಂದಿಸಲು ಯತ್ನಿಸಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 Comments