Ticker

6/recent/ticker-posts

Ad Code

ರಾಜ್ಯದ 12 ಜಿಲ್ಲೆಗಳಲ್ಲಿ ತಾಪಮಾನ ಮೂರು ಡಿಗ್ರಿ ಏರಿಕೆ ಸಾಧ್ಯತೆ : ಇಲಾಖೆ ಮುನ್ನೆಚ್ಚರಿಕೆ

 

ಕಾಸರಗೋಡು : ಮಾರ್ಚ್ 23 ರಿಂದ 26 ರವರೆಗೆ ರಾಜ್ಯದ 12 ಜಿಲ್ಲೆಗಳಲ್ಲಿ ತಾಪಮಾನ ಮೂರು ಡಿಗ್ರಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಪಾಲಕ್ಕಾಡ್ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ತಾಪಮಾನ 38 ಡಿಗ್ರಿಗಳಿಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ತಾಪಮಾನ 37 ಡಿಗ್ರಿಗಳಿಗೆ ಮತ್ತು ತಿರುವನಂತಪುರಂ, ಕಣ್ಣೂರು, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ತಾಪಮಾನ 36 ಡಿಗ್ರಿಗಳಿಗೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ತಾಪಮಾನ ಮತ್ತು ತೇವಾಂಶವುಳ್ಳ ಗಾಳಿಯಿಂದಾಗಿ ಈ ಜಿಲ್ಲೆಗಳಲ್ಲಿ ತೊಂದರೆ ಉಂಟಾಗುವ ಸಾಧ್ಯತೆಯಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Post a Comment

0 Comments