Ticker

6/recent/ticker-posts

Ad Code

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್ ಹಾಗೂ ಡಾ. ರವೀಶ್ ಪಡುಮಲೆಯವರಿಗೆ ಗೌರವ ಡಾಕ್ಟರೇಟ್

 

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ, ಕಲೆ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ಪಿ.ಎಲ್. ಧರ್ಮ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಕ್ಷರ ಸಂತ' ಎಂದು ಖ್ಯಾತಿ ಪಡೆದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಯಕ್ಷಗಾನ ರಂಗದ ಹಿರಿಯ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ಡಾ. ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದರು.

ಮಾರ್ಚ್ 28ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚ೦ದ್ ಗೆಹೋಟ್‌ ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಹಾಗೂ ಸಹಕುಲಾಧಿಪತಿ ಡಾ. ಎಂ.ಸಿ. ಸುಧಾಕ‌ರ್ ಉಪಸ್ಥಿತರಿರುವರು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.

ಈ ಬಾರಿ ಒಟ್ಟು 162 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದ್ದು ಇವರಲ್ಲಿ 74 ಮಹಿಳೆಯರು ಹಾಗೂ 88 ಪುರುಷರು ಸೇರಿದ್ದಾರೆ. 11 ಮಂದಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳೂ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಜೊತೆಗೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ರ‍್ಯಾಂಕ್ ಪಡೆದ 147 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ. ದೇವೇಂದ್ರಪ್ಪ ಪರೀಕ್ಷಾಂಗ ನಿಯಂತ್ರಕ ಗಣೇಶ್ ಸಂಜೀವ ಹಾಗೂ ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಉಪಸ್ಥಿತರಿದ್ದರು.

Post a Comment

0 Comments