ಕಾಸರಗೋಡು : ಪ್ಲಸ್ ಟು ಪರೀಕ್ಷೆಯಲ್ಲಿ ವ್ಯಕ್ತಪಲ್ಲಟ ನಡೆಸಿರುವುದಾಗಿ ದೂರಲಾಗಿದೆ. ಮೊಗ್ರಾಲ್ ಸರ್ಕಾರಿ ವೃತ್ತಿಪರ ಪ್ರೌಢಶಾಲೆಯ ಪ್ರಾಂಶುಪಾಲ ವಿ.ಎಸ್. ಬಿನಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಕುಂಬಳೆ ಪೊಲೀಸರು, ವ್ಯಕ್ತಿ ಪಲ್ಲಟ ನಡೆಸಿದ ಆರೋಪಿಯನ್ನು ಬಂಧಿಸಿದ್ದಾರೆ. ಬಂಬ್ರಾಣ ಅಡ್ಯಂತಡ್ಕದ ಮುಹಮ್ಮದ್ ಮುಕ್ತರ್ (20) ಎಂಬಾತನನ್ನು ಕುಂಬಳೆ ಪೊಲೀಸ್ ಇನ್ಸ್‌ಪೆಕ್ಟರ್ ಬೈಜು ಕೆ. ಜೋಸ್ ಮತ್ತು ಎಸ್‌ಐ ಅನಂತಕೃಷ್ಣನ್ ಆರ್. ಮೆನನ್ ಬಂಧಿಸಿದ್ದಾರೆ. ಘಟನೆಯಲ್ಲಿ ಪ್ಲಸ್ ಟು ವಿದ್ಯಾರ್ಥಿಯ ವಿರುದ್ಧವೂ ಪ್ರಕರಣ ದಾಖಲಾಗಿದೆ. ಸೋಮವಾರ ಮಧ್ಯಾಹ್ನ ನಡೆದ ಕಂಪ್ಯೂಟರ್ ಅಪ್ಲಿಕೇಶನ್ ಪರೀಕ್ಷೆಯಲ್ಲಿ ವ್ಯಕ್ತಿ ಪಲ್ಲಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಯ ಅರಿವಿನೊಂದಿಗೆ ನಕಲಿ ವ್ಯಕ್ತಿ ಪರೀಕ್ಷೆಗೆ ಹಾಜರಾಗಿದ್ದ. ಈ ಬಗ್ಗೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

0 Comments