ಪೆರ್ಲ : ಇತಿಹಾಸ ಪ್ರಸಿದ್ಧ ನೆಲ್ಲಿಕುಂಜೆ ಶ್ರೀಮಹಾವಿಷ್ಣು ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಯಶಸ್ವಿಗಾಗಿ ಕುಂಬಳೆ ಸೀಮೆಯ ಪ್ರಧಾನ ನಾಲ್ಕು ಕ್ಷೇತ್ರಗಳಾದ ಮಧೂರು, ಅಡೂರು, ಮುಜುಂಗಾವು, ಕಣಿಪುರ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಆಮಂತ್ರಣ ಪತ್ರಿಕೆ ನೀಡಲಾಯಿತು. ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಮಾನಾಥ ರೈ ಮೇಗಿನ ಕಡಾರು, ಪ್ರಧಾನ ಕಾರ್ಯದರ್ಶಿ ಮಹೇಶ ಗುತ್ತು, ಕೋಶಾಧಿಕಾರಿ ಗೋಪಾಲಕೃಷ್ಣ ಶರ್ಮ ಸರವು ಸಹಿತ ವಿವಿಧ ಸಮಿತಿ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದೇ ಬರುವ ಮಾರ್ಚ್ 29 ರಿಂದ ಎಪ್ರಿಲ್ 3ನೇ ತಾರೀಕಿನವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

0 Comments