ಬೆಂಗಳೂರು : ಮೂವರು ವೈದ್ಯರು ಜನದಟ್ಟಣೆಯ ರಸ್ತೆಯಲ್ಲಿ ಮದ್ಯ ಸೇವಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆದ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆದಿತ್ಯವಾರ ರಾತ್ರಿ ಜಯದೇವ ಜಂಕ್ಷನ್ ಮತ್ತು ಬಿಟಿಎಂ ಲೇಔಟ್ ನಡುವೆ ಈ ಘಟನೆ ನಡೆದಿದೆ. ದಟ್ಟವಾದ ಟ್ರಾಫಿಕ್‌ನಲ್ಲಿ ಮೂವರು ವ್ಯಕ್ತಿಗಳು ದ್ವಿಚಕ್ರ ವಾಹನವನ್ನು ಸವಾರಿ ಮಾಡುತ್ತಾ ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ರಸ್ತೆಯಲ್ಲಿ ಝಿಗ್-ಜಾಗ್ ರೀತಿಯಲ್ಲಿ ಚಾಲನೆ ಮಾಡಿದ್ದರು.
ಬಂಧಿತರನ್ನು ಧನುಷ್ ಎಸ್, ಅಪೂರ್ವ ಮತ್ತು ಅವಿನಾಶ್ ಎಂದು ಗುರುತಿಸಿದ್ದಾರೆ, ಎಲ್ಲರೂ ಮೂಳೆಚಿಕಿತ್ಸಾ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ಧನುಷ್ ಚಿಕ್ಕಬಾಣಾವರದಲ್ಲಿರುವ ಸಪ್ತಗಿರಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಅಪೂರ್ವ ವೈದೇಹಿ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವಿನಾಶ್ ಕರ್ನಾಟಕದ ರಾಮನಗರ ಜಿಲ್ಲೆಯ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿರುವುದಾಗಿ ತಿಳಿದುಬಂದಿದೆ.
ಸೋಮವಾರ ಮೂವರನ್ನು ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಕರೆತರಲಾಯಿತು, ಮೂವರ ಬಂಧನ ದಾಖಲಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

0 Comments