ಕೇರಳ ಸರಕಾರವು ವಿಧಾನಸಭೆಯಲ್ಲಿ ಅಂಗೀಕರಿಸಿದ ಮಲಯಾಳ ಭಾಷಾ ಮಸೂದೆಗೆ ಕೇರಳ ರಾಜ್ಯಪಾಲರು ಸಹಿ ಹಾಕಿದ ಹಿನ್ನೆಲೆಯಲ್ಲಿ ನಾವು ಏನು ಮಾಡಬಹುದು ಎನ್ನುವುದರ ಬಗ್ಗೆ ಗಂಭೀರವಾಗಿ ಸಮಾಲೋಚಿಸಲು ಮಾರ್ಚ್ 10 ರಂದು ಸಂಜೆ 4:30ಕ್ಕೆ ಕಾಸರಗೋಡು ಬೀರಂತ ಬೈಲಿನಲ್ಲಿರುವ ಕನ್ನಡ ಅಧ್ಯಾಪಕ ಭವನದಲ್ಲಿ ಕರ್ನಾಟಕ ಸಮಿತಿಯ ನೇತೃತ್ವದಲ್ಲಿ ಕಾಸರಗೋಡಿನ ಕನ್ನಡಿಗರ, ಅಧ್ಯಾಪಕರ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳ ಸಭೆಯನ್ನು ಕರೆಯಲಾಗಿದೆ. ಕನ್ನಡಾಭಿಮಾನಿಗಳೆಲ್ಲರೂ ಈ ಸಭೆಯಲ್ಲಿ ಹಾಜರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

0 Comments