Ticker

6/recent/ticker-posts

Ad Code

ಕಾಸರಗೋಡು ಕ್ಷೇತ್ರದ ಎನ್‌ಡಿಎ ಚುನಾವಣಾ ಕಚೇರಿ ಉದ್ಘಾಟನೆ


ಕಾಸರಗೋಡು : ಕಾಸರಗೋಡು ಕ್ಷೇತ್ರದ ಎನ್‌ಡಿಎ ಚುನಾವಣಾ ಕಚೇರಿಯನ್ನು ಪನ್ವೇಲ್ ಶಾಸಕ ಪ್ರಶಾಂತ್ ಠಾಕೂರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ರಸ್ತೆ ಅಭಿವೃದ್ಧಿ ಸೇರಿದಂತೆ ದಶಕಗಳಿಂದ ರಾಜ್ಯದಲ್ಲಿ ಬಗೆಹರಿಯದ ಅಗತ್ಯಗಳನ್ನು ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ಪೂರೈಸಲಾಗಿದೆ ಎಂದು ಅವರು ಹೇಳಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಹಾಗೂ ಕಾಸರಗೋಡು ಮಂಡಲ ಎನ್‌ಡಿಎ ಸಂಚಾಲಕ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದ್ದರು. ಎನ್‌ಡಿಎ ಅಭ್ಯರ್ಥಿ ಎಂ.ಎಲ್.ಅಶ್ವಿನಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಎಂ.ಸಂಜೀವ ಶೆಟ್ಟಿ, ಕೋಝಿಕ್ಕೋಡ್ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಪನ್ವೇಲ್ ನಗರಸಭೆ ಸದಸ್ಯ ಸಂತೋಷ್ ಶೆಟ್ಟಿ, ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ವಿ.ರವೀಂದ್ರನ್, ಸತೀಶ್ ಚಂದ್ರ ಭಂಡಾರಿ, ಸವಿತಾ ಟೀಚರ್, ರಾಮಪ್ಪ ಮಂಜೇಶ್ವರ, ವೇಲಾಯುಧನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಬಾಬುರಾಜ್,  ಜಿಲ್ಲಾ ಉಪಾಧ್ಯಕ್ಷ ಎಂ. ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ಶ್ರೀಧರ ಬೆಳ್ಳೂರು, ಕಾಸರಗೋಡು ಮಂಡಲ ಅಧ್ಯಕ್ಷ ಗುರುಪ್ರಸಾದ್ ಪ್ರಭು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಧರ ಕೂಡ್ಲು , ಚಂದ್ರಶೇಖರ ಬಿ. ಮಾತನಾಡಿದರು.

Post a Comment

0 Comments