ಕುಂಬಳೆ: ಕಿದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಾಗೂ ಶಾಲಾ ಸುವರ್ಣ ಮಹೋತ್ಸವದ ಸವಿನೆನಪಿಗಾಗಿ ನಿರ್ಮಿಸಿದ ಶಾಲಾ ಮಹಾದ್ವಾರ ಉದ್ಘಾಟನಾ ಸಮಾರಂಭ ವಿಜೃಂಭಣೆಯಿಂದ ಜರಗಿತು. ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ಕುಂಬಳೆ ಗ್ರಾಮ ಪಂಚಾಯತ್ ಅಧ್ಯಕ್ಷ ವಿ.ಪಿ.ಅಬ್ದುಲ್ ಖಾದರ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಲೋಕೋಪಯೋಗಿ ಇಲಾಖೆ ಎ ಕ್ಲಿಕ್ಯೂಟ್ ಇಂಜಿನಿಯರ್ ಜಗದೀಶ್ ವರದಿ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯೆ ನಸೀಮ ಪಿ.ಎಂ., ಕುಂಬಳೆ ಗ್ರಾಮ ಪಂಚಾಯತ್ ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಎಂ.ಪಿ.ಖಾಲಿದ್, ಪಂಚಾಯತ್ ಸದಸ್ಯರಾದ ಸುಕೇಶ್ ಭಂಡಾರಿ, ಮಂಜುನಾಥ ಆಳ್ವ ಮಡ್ವ, ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಇಬ್ರಾಹಿಂ.ಬಿ., ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಜೋರ್ಜ್ ಕ್ರಾಸ್ತ್ರ, ಮಂಜೇಶ್ವರ ಸುಪರಿಂಟೆಂಡೆಂಟ್ ಎಇಒ ಜಿತೇಂದ್ರ ಎಸ್.ಎಚ್., ರಾಜಗೋಪಾಲನ್ ಪಿ., ಜಿಲ್ಲಾ ಪಂಚಾಯತ್ ಸದಸ್ಯ ಆಝೀಜ್ ಕಳತ್ತೂರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸೇವೆಯಿಂದ ನಿವೃತ್ತಿ ಹೊಂದಲಿರುವ ವೀಣಾ ಕುಮಾರಿ ಕೆ.ಸಿ. ಅವರನ್ನು ಸಂಘ ಸಂಸ್ಥೆಗಳಿಂದ ಗೌರವಿಸಲಾಯಿತು.
ಕಿದೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ರಾಮ ಯು., ಇಚ್ಲಂಪಾಡಿ ಎಎಸ್‌ಬಿ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ನರಹರಿ ಕೆ, ಪುಂಡರೀಕಾಕ್ಷ ಕೆ.ಎಲ್., ಕುಂಬಳೆ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಪುಷ್ಪಲತಾ ಶೆಟ್ಟಿ ಕುಂಬಳೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರವಿರಾಜ್ ಕೆ., ಬಿಜೆಪಿ ರಾಜ್ಯ ಸಮಿತಿ ಸದಸ್ಯ ಸುರೇಶ್‌ಕುಮಾರ್ ಶೆಟ್ಟಿ ಪೂಕಟ್ಟೆ, ಬಾಲಕೃಷ್ಣ ಶೆಟ್ಟಿ, ಆನಂದ ರೈ ಕಾಜುರು, ಮಹೇಶ್ ಶೆಟ್ಟಿ ಕಾಜೂರು, ಸುರೇಶ್ ಪಾದೆಕಲ್ಲು, ವೆಂಕಪ್ಪ ಶೆಟ್ಟಿ ಶುಭಹಾರೈಸಿದರು. ಶಾಲಾ ಶಿಕ್ಷಕ ಸಂತೋಷ್ ಪ್ರಸಾದ್ ವಂದಿಸಿದರು. ಶಿಕ್ಷಕಿ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಬಾಲಗೋಕುಲ, ಶಾಲಾ ಮಕ್ಕಳಿಂದ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃ ತಿಕ ಕಾರ್ಯಕ್ರಮ ಜರಗಿತು


0 Comments