ಬದಿಯಡ್ಕ : ಪಂಚಾಯತಿನ ಎರಡನೇ ವಾರ್ಡ್ ಕಿಳಿಂಗಾರ್ ಬೇರಿಕೆಯಲ್ಲಿ ಕುಡಿಯುವ ನೀರಿನ ಯೋಜನೆಯನ್ನು ಉದ್ಘಾಟಿಸಲಾಯಿತು. ಪಂಚಾಯತ್ ಅಧ್ಯಕ್ಷ ಶಂಕರ .ಡಿ ಉದ್ಘಾಟಿಸಿದರು. ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅವಿನಾಶ್ ರೈ, ಪಂಚಾಯತ್ ಸದಸ್ಯ ಹರೀಶ್ ಮೊದಲಾದವರು ಉಪಸ್ಥಿತರಿದ್ದರು. ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿರುವ ಕಾರಣ ಸ್ಥಳೀಯ ಜನರ ಬಹುದಿನಗಳ ಬೇಡಿಕೆಗೆ ಪರಿಹಾರ ಸಿಕ್ಕಂತಾಗಿದೆ.

0 Comments