ಉಪ್ಪಿನಂಗಡಿ : ಮೀನು ಸಾಗಾಟದ ಲಾರಿ ಬೆಂಕಿಗೆ ಆಹುತಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಘಾಟಿ ಪ್ರದೇಶದ ಕೆಂಪಳ್ಳ ಎಂಬಲ್ಲಿ ಸೋಮವಾರ ಸಂಭವಿಸಿದೆ. ಮೀನು ಸರಬರಾಜು ಮಾಡಿ ಲಾರಿ ಮಂಗಳೂರಿಗೆ ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್, ಲಾರಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸುವ ವೇಳೆ ಲಾರಿ ಸುಟ್ಟು ಹೋಗಿದೆ. ಬಳಿಕ ಪೊಲೀಸರು ಹೆಚ್ಚಿನ ಬಂದೋಬಸ್ತ್ ಕೈಗೊಂಡಿದ್ದಾರೆ.

0 Comments