Ticker

6/recent/ticker-posts

Ad Code

ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜು ಆಸ್ಪತ್ರೆಯ ಆವರಣದಿಂದ ವ್ಯಾಪಕ ಮರ ಕೊಳ್ಳೆ : ಆರೋಪ

ಪೆರ್ಲ : ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜು ಆಸ್ಪತ್ರೆಯ ಆವರಣದಲ್ಲಿರುವ ಮರಗಳನ್ನು ಅಕ್ರಮವಾಗಿ ವ್ಯಾಪಕ ಕಡಿದು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಕಟ್ಟಿಗೆಗಾಗಿ ಮರಗಳನ್ನು ಕಡಿಯಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ಕಳೆದ ಭಾನುವಾರ ಐದು ಮಂದಿ ಕಾರ್ಮಿಕರು ಮರ ಕಡಿದು ಹಾಕಿದ್ದು ವ್ಯವಸ್ಥಿತ ತಂಡವೊಂದು ಇದರ ಹಿಂದಿದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  ಮೆಡಿಕಲ್ ಕಾಲೇಜಿನ ಸೆಕ್ಯೂರಿಟಿ ಸಿಬ್ಬಂದಿ ಇದನ್ನು ಕಂಡರೂ ಕಾಣದಂತೆ ನಟಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಗಮನಕ್ಕೆ ಬಂದಿದ್ದು, ಕಾನೂನು ಕ್ರಮ ಕೈಗೊಳ್ಳುವುದಾಗಿ ಮೆಡಿಕಲ್ ಕಾಲೇಜು ಅಧಿಕಾರಿಗಳು ತಿಳಿಸಿದ್ದಾರೆ.

 

Post a Comment

0 Comments