ಮಂಜೇಶ್ವರ : ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಕೆ.ಎಂ. ಅಶ್ರಫ್ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಗುರುವಾರ ಬೆಳಿಗ್ಗೆ ಉಪ್ಪಳದಲ್ಲಿ ಎಸ್‌ಡಿಪಿಐ ರಾಜ್ಯ ಅಧ್ಯಕ್ಷ ಲತೀಫ್ ನೇತೃತ್ವದಲ್ಲಿ ನಡೆದ ಸಭೆಯಿಂದ ಹೊರ ನಡೆದ ಬಳಿಕ ಅವರು ಮಧ್ಯಾಹ್ನ ಕಲೆಕ್ಟರೇಟ್‌ಗೆ ತಲುಪಿ ತಮ್ಮ ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ. ಎಸ್ ಡಿ ಪಿ ಐ ರಾಜ್ಯ ಮಟ್ಟದ ಪದಾಧಿಕಾರಿಗಳೊಂದಿಗೆ ಉಪ್ಪಳದಲ್ಲಿ ಭಾರೀ ಮಾತುಕತೆ ನಡೆದಿತ್ತು. ಮಂಜೇಶ್ವರದಿಂದ ಪಕ್ಷದ ಅಭ್ಯರ್ಥಿಯನ್ನು ಹಿಂತೆಗೆದುಕೊಳ್ಳುವ ಬಗ್ಗೆ ವ್ಯಾಪಕ ಚರ್ಚೆಗಳು ನಡೆದಿವೆ ಎಂದು ತಿಳಿದು ಬಂದಿದೆ. ಪಕ್ಷದ ಸೂಚನೆಯ ಮೇರೆಗೆ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಅದೇ ನಾಯಕತ್ವವು ಅದನ್ನು ಹಿಂತೆಗೆದುಕೊಳ್ಳುವಂತೆ ಕೇಳುತ್ತಿದೆ. ಇದು ಸರಿಯಾದ ವಿಧಾನವಲ್ಲ ಎಂದು ಸಭೆಯಿಂದ ನಿರ್ಗಮಿಸಿದ ನಂತರ ಕೆಎಂ ಅಶ್ರಫ್ ತಿಳಿಸಿದರು. ನಾಮಪತ್ರವನ್ನು ಹಿಂತೆಗೆದುಕೊಳ್ಳುವ ಜತೆಗೆ ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅಶ್ರಫ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

0 Comments