Ticker

6/recent/ticker-posts

Ad Code

ತೆಂಕುತಿಟ್ಟು ಯಕ್ಷಗಾನದ ಮೇರು ಸೂರಿಕುಮೇರು ಕೆ. ಗೋವಿಂದ ಭಟ್ ಅಸ್ತಂಗತ


 ದಶಕಗಳಿಗೂ ಅಧಿಕ ಕಾಲ ರಂಗಸ್ಥಳವನ್ನು ಆಳಿದ ಯಕ್ಷಗುರು ಸೂರಿಕುಮೇರು ಕೆ. ಗೋವಿಂದ ಭಟ್ ಅವರು ತೀರ್ಥಹಳ್ಳಿಯ ತಮ್ಮ ಹಿರಿಯ ಪುತ್ರನ ನಿವಾಸದಲ್ಲಿ ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. . ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಕೆಲವು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ತೆಂಕುತಿಟ್ಟು ಯಕ್ಷಗಾನದ ಅಪ್ರತಿಮ ಕಲಾವಿದರಾದ ಗೋವಿಂದ ಭಟ್ಟರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದ್ದರು. ತಾಳಮದ್ದಳೆಯಲ್ಲಿಯೂ ಪ್ರಸಿದ್ಧರಾಗಿದ್ದ ಶ್ರೀಯುತರು ರಂಗಸ್ಥಳದಲ್ಲಿ ತಮ್ಮ ಪಾತ್ರಗಳಿಗೆ ಪರಕಾಯ ಪ್ರವೇಶ ಮಾಡುವುದರಲ್ಲಿ ನಿಸ್ಸೀಮರಾಗಿದ್ದರು.

ತಮ್ಮ 11ನೇ ವಯಸ್ಸಿನಲ್ಲಿ ಯಕ್ಷಗಾನ ಲೋಕಕ್ಕೆ ಕಾಲಿಟ್ಟ ಗೋವಿಂದ ಭಟ್ಟರು ಶ್ರೀ ಧರ್ಮಸ್ಥಳ ಮೇಳವೊಂದರಲ್ಲೇ 50 ವರ್ಷಗಳಿಗೂ ಅಧಿಕ ಕಾಲ ತಿರುಗಾಟ ನಡೆಸಿದ್ದರು. ಮಣಿಮೇಖನೆ, ಕಾವೇರಿ ಮಹಾತ್ಮ, ಮೂರುವರೆ ವಜ್ರಗಳು, ರಾಜಶೇಖರ ವಿಲಾಸ, ಮಹಾವೀರ ಸಾಮ್ರಾಟ ಅಶೋಕ, ನಹುಷೇಂದ್ರ ಪ್ರಸಂಗಗಳನ್ನು ಅವರು ರಚಿಸಿದ್ದಾರೆ. ರಕ್ತಬೀಜ, ಈಶ್ವರ, ಗಣಮಣಿ, ಅರ್ಜುನ, ಭೀಷ್ಮ ಪರಶುರಾಮ, ಕೀಚಕ.. ಹೀಗೆ ಎಲ್ಲಾ ಪಾತ್ರಗಳನ್ನು ನಿರ್ವಹಿಸಿದ್ದರಲ್ಲದೆ ಸ್ತ್ರೀ ವೇಷದಲ್ಲೂ ಸೈ ಎನ್ನಿಕೊಂಡಿದ್ದರು. ಯಕ್ಷಗಾನ ಕ್ಷೇತ್ರದ ‘ನಡೆದಾಡುವ ವಿಶ್ವಕೋಶ’, ‘ದಶಾವತಾರಿ’ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ಟರು ಅನೇಕ ಶಿಷ್ಯರನ್ನು ಅವರು ಹುಟ್ಟುಹಾಕಿದ್ದಾರೆ.

ಬಡತನದಲ್ಲಿ ಹುಟ್ಟಿ ಅಪ್ರತಿಮ ಸಾಧನೆಗೈದ  ಟ್ಟರಿಗೆ 2008ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತ್ ಪುರಸ್ಕಾರ, ಕರ್ನಾಟಕ ಜಾನಪದ ಅಕಾಡೆಮಿ ಸಾಧನಾ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಗೌರವ ಸನ್ಮಾನಗಳು ದೊರೆತಿವೆ.

ಅವರು ಪತ್ನಿ ಹಾಗೂ ಮೂವರು ಪುತ್ರರ ಸಹಿತ ಬಂಧುಬಳಗ, ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

Post a Comment

0 Comments