ಮಂಗಳೂರು : ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವ್ಯಕ್ತಿಯನ್ನು ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೇನ್ ಯಾನೆ ‘ಟಾಬ್ಲೆಟ್ ಆರಿಫ್’ (46) ಎಂದು ಗುರುತಿಸಲಾಗಿದೆ. ಮೃತ ಆರೀಫ್ ಧಕ್ಕೆಯಲ್ಲಿ ಮೀನಿನ ವ್ಯಾಪಾರ ಮಾಡುತ್ತಿದ್ದು, ಇಂದು (ಮಾ.27) ಬೆಳಗ್ಗೆ ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಆರಿಫ್ ರಸ್ತೆಗೆ ಬಿದ್ದಾಗ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ. ಮೂಲತಃ ಕುದ್ರೋಳಿ ನಿವಾಸಿಯಾಗಿದ್ದು, ಆರೇಳು ವರ್ಷಗಳಿಂದ ತನ್ನ ಕುಟುಂಬದ ಜೊತೆ ಅಜ್ಜಿನಡ್ಕ ಬಳಿಯ ಮುಳ್ಳುಗುಡ್ಡೆ ಎನ್ನುವಲ್ಲಿ ಮನೆ ಮಾಡಿ ವಾಸವಿದ್ದ. ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಡಿಸಿಪಿ ಮಿಥುನ್, ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಮೃತ ಆರೀಫ್, ಪತ್ನಿ, ಮೂರು ಗಂಡು, ಒಂದು ಹೆಣ್ಣು ಮಗಳನ್ನು ಅಗಲಿದ್ದಾನೆ.

0 Comments