ಬದಿಯಡ್ಕ : ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ನವೀಕರಣ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏಪ್ರಿಲ್ 17ರಿಂದ ಏಪ್ರಿಲ್ 28ರ ತನಕ ಜರಗಲಿದ್ದು ಪೂರ್ವಭಾವಿಯಾಗಿ ಶುಕ್ರವಾರ ಚಪ್ಪರ ಮುಹೂರ್ತ ನಡೆಯಿತು. ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಚಪ್ಪರ ಮುಹೂರ್ತ ನೆರವೇರಿಸಿದರು. ಪ್ರಧಾನ ಅರ್ಚಕ ವೇದಮೂರ್ತಿ ಶಿವರಾಮ ಭಟ್ ಪೆರಡಾಲ ಪೂಜಾದಿ ಕಾರ್ಯಗಳನ್ನು ನೆರವೇರಿಸಿದರು. ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಗನ್ನಾಥ ರೈ, ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಸೇವಾಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸೂರ್ಯನಾರಾಯಣ ಬಿ. ಆಡಳಿತ ಸಮಿತಿ ಸದಸ್ಯ ಸೀತಾರಾಮ ನವಕಾನ, ಉಪಾಧ್ಯಕ್ಷರುಗಳಾದ ಪಿ.ಜಿ.ಚಂದ್ರಹಾಸ ರೈ, ತಿರುಪತಿ ಕುಮಾರ ಭಟ್, ಜೊತೆ ಕಾರ್ಯದರ್ಶಿಗಳಾದ ಉದಯಶಂಕರ ಪಿ.ಎಸ್, ಗಣೇಶ್‌ಪ್ರಸಾದ ಕಡಪ್ಪು, ಸತೀಶ ಪುದ್ಯೋಡು, ಡಾ.ಶ್ರೀಶಕುಮಾರ ಪಂಜಿತ್ತಡ್ಕ, ಲೆಕ್ಕಪರಿಶೋಧಕ ಕುಞ್ಞಣ್ಣ ಬದಿಯಡ್ಕ, ಶಿವಶಕ್ತಿ ಕ್ಲಬ್ಬಿನ ಸದಸ್ಯರು, ಭಗವದ್ಭಕ್ತರು ಪಾಲ್ಗೊಂಡಿದ್ದರು. ಬ್ರಹ್ಮಕಲಶೋತ್ಸವ ಚಪ್ಪರ ಸಮಿತಿಯ ಅಧ್ಯಕ್ಷ ಭಾಸ್ಕರ ಪಂಜಿತ್ತಡ್ಕ, ಸಂದೀಪ್ ಪೆರಡಾಲ, ವೆಂಕಟ್ರಮಣ ಭಟ್ ಪುದ್ಯೋಡು ಹಾಗೂ ಸದಸ್ಯರು ನೇತೃತ್ವ ವಹಿಸಿದ್ದರು. ಚಪ್ಪರ ವಹಿಸಿಕೊಂಡ ಶಿವಪ್ರಸಾದ್ ಹೆಗ್ಡೆ ಮಂಗಳೂರು ಅವರಿಗೆ ಶ್ರೀಗಳು ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.

0 Comments