Ticker

6/recent/ticker-posts

Ad Code

ಜಿಲ್ಲಾ ಮಟ್ಟದ ಮತದಾರರ ಜಾಗೃತಿ ಕಾರ್ಯಕ್ರಮದ ಲಾಂಛನ ಬಿಡುಗಡೆ

 

ಕಾಸರಗೋಡು : 2026 ರ ವಿಧಾನಸಭಾ ಚುನಾವಣೆಯ ಅಂಗವಾಗಿ ಜಿಲ್ಲಾ ಮಟ್ಟದ  ಮತದಾರರ ಜಾಗೃತಿ ಕಾರ್ಯಕ್ರಮವಾದ SWEEPನ‌ ಲಾಂಛನವನ್ನು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್  ಬಿಡುಗಡೆಗೊಳಿಸಿದರು. ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕೇಂದ್ರ ಚುನಾವಣಾ ಆಯೋಗವು ನಿಗದಿಪಡಿಸಿದ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡಿಯನ್ ಹೇಳಿದರು. ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದಲ್ಲಿ ಹಸಿರು ಸಂಹಿತೆಯನ್ನು ಪಾಲಿಸಬೇಕು. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಅಕ್ರಮ ಪ್ರಚಾರ ಸಾಮಗ್ರಿಗಳನ್ನು ತೆಗೆದುಹಾಕಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಸಭೆಯಲ್ಲಿ ಚುನಾವಣಾ ಉಪ ಜಿಲ್ಲಾಧಿಕಾರಿ ಎ ಎನ್ ಗೋಪಕುಮಾರ್, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು   ಭಾಗವಹಿಸಿದ್ದರು.

Post a Comment

0 Comments