ಪೆರ್ಲ : ಎಣ್ಮಕಜೆ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ತಪಾಸಣೆಗೆ ಸಂಬಂಧಿಸಿದಂತೆ ಕ್ವಾರ್ಟರ್ಸ್ ಮತ್ತು ಅಪಾರ್ಟ್‌ಮೆಂಟ್‌ಗಳಲ್ಲಿ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ಎಣ್ಮಕಜೆ ಗ್ರಾಮ ಪಂಚಾಯತ್ ಎನ್ಫೋರ್ಸ್ ಮೆಂಟ್ ಸ್ಕ್ವಾಡ್ ನೇತೃತ್ವದಲ್ಲಿ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಈಗಾಗಲೇ ಪಂಚಾಯತಿನ ಹಲವು ಕಡೆಗಳ ಕ್ವಾರ್ಟರ್ಸ್ ಗಳಲ್ಲಿ ತ್ಯಾಜ್ಯವನ್ನು ಬೇರ್ಪಡಿಸದಿರುವುದು, ಬಳಕೆದಾರ ಶುಲ್ಕವನ್ನು ಪಾವತಿಸದಿರುವುದು, ಸಾರ್ವಜನಿಕ ತೆರೆದ ಸ್ಥಳಗಳಲ್ಲಿ ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ಸುರಿಯುವುದು ಮತ್ತು ರಾಶಿ ಹಾಕುವುದು ಮತ್ತು ಸಾರ್ವಜನಿಕ ಸ್ಥಳಗಳಿಗೆ ಕೊಳಕು ನೀರನ್ನು ಬಿಡುವುದರ ವಿರುದ್ಧ ತಪಾಸಣೆಗಳನ್ನು ಬಿಗಿಗೊಳಿಸಲಾಗಿದೆ. ಕಾನೂನು ಉಲ್ಲಂಘಿಸುವವರು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

0 Comments