ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ವರ್ಷಾವಧಿ ಜಾತ್ರೆಯು ಶುಕ್ರವಾರ ಹಾಗೂ ಶನಿವಾರಗಳಂದು ಜರಗಿತು. ಶುಕ್ರವಾರ ಪೂರ್ವಾಹ್ನ ಉಷಃಪೂಜೆ, ದೇವಸ್ಯ ಜಯರಾಮ ಭಟ್ ಮತ್ತು ಬಳಗದವರಿಂದ ಯಕ್ಷಗಾನ ತಾಳಮದ್ದಳೆ, ನವಕಾಭಿಷೇಕ ಮತ್ತು ತುಲಾಭಾರ ಸೇವೆ ಜರಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಭಜನೆ, ರಾತ್ರಿ ಶ್ರೀ ದೇವರ ಬಲಿ ಉತ್ಸವ, ಸಿಡಿಮದ್ದು ಪ್ರದರ್ಶನ ಜರಗಿತು. ಶನಿವಾರ ಶ್ರೀಭೂತಬಲಿ ಉತ್ಸವ, ಬಟ್ಟಲು ಕಾಣಿಕೆ, ಶ್ರೀಮುಡಿ ಗಂಧಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಿತು.

0 Comments