ರಾಯಚೂರು : ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ 8 ಜನ ಭೀಕರವಾಗಿ ಸಾವನ್ನಪ್ಪಿರುವ ಘಟನೆ ಆಂಧ್ರದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ಬಳಿಯ ಚಿಲಕನಡೋಣ ಬಳಿ ನಡೆದಿದೆ. ಹಾಸನದ ಒಂದೇ ಕುಟುಂಬದ ಆರು, ಚಿಕ್ಕಮಗಳೂರು ಜಿಲ್ಲೆಯ ಇಬ್ಬರು ಸೇರಿ ಒಟ್ಟು ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಮಾರ್ (50), ದೀಪಿಕಾ (42) , ಸುನಿಲ್ (40) ಯಶೋಧಮ್ಮ (60), ಪುಟ್ಟಮ್ಮ (55), ಬೆಳ್ಳಿ (5), ಲೋಲಾಕ್ಷಿ ಹಾಗೂ ಮೀನಾಕ್ಷಿ ಮೃತರು.
ಇಂದು (ಏ.16) ಮುಂಜಾವ 4 ಗಂಟೆ ಸುಮಾರಿಗೆ ರಾಯರ ದರ್ಶನಕ್ಕಾಗಿ ಮಂತ್ರಾಲಯಕ್ಕೆ ತೆರಳುತ್ತಿದ್ದ ಬುಲೆರೋ ವಾಹನಕ್ಕೆ ಬೀದರ್‌ನಿಂದ ತುಮಕೂರಿಗೆ ಹೋಗುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದಾರೆ. ಈ ವಾಹನದಲ್ಲಿ ಒಟ್ಟು 21 ಮಂದಿ ಸಂಚರಿಸುತ್ತಿದ್ದರು. ಬದುಕುಳಿದ ಗಾಯಾಳುಗಳನ್ನು ಕರ್ನೂಲು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂತ್ರಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

0 Comments