Ticker

6/recent/ticker-posts

Ad Code

ಮತದಾನಕ್ಕಾಗಿ ತಾಯ್ನಾಡಿಗೆ ಬರುವ ವೇಳೆ ನಿಯಂತ್ರಣ ತಪ್ಪಿದ ಕಾರು ಪಲ್ಟಿ – ವ್ಯಕ್ತಿಯ ಸ್ಥಿತಿ ಗಂಭೀರ

ಹಾಸನ : ನಾಳೆ  ನಡೆಯಲಿರುವ ವಿಧಾನಸಭಾ ಚುನಾವಣೆಗೆ  ಮತ ಚಲಾಯಿಸಲು ಆಗಮಿಸುತ್ತಿದ್ದ ಕಾರು ಅಪಘಾತವಾಗಿ  ಕಾರಿನಲ್ಲಿದ್ದ ವ್ಯಕ್ತಿ ಗಂಭಿರವಾಗಿ ಗಾಯಗೊಂಡ ಘಟನೆ ಸಕಲೇಶಪುರದ  ಮಳಲಿ ಬೈಪಾಸ್ ಬಳಿ ನಡೆದಿದೆ.

ಗಾಯಾಳುವನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹೈದರಾಬಾದ್‌ನಲ್ಲಿ ಕೆಲಸ ಮಾಡುತ್ತಿದ್ದ ಖಾದರ್ ಮತ ಚಲಾಯಿಸಲು ಕಾರಿನಲ್ಲಿ ಕೇರಳಕ್ಕೆ ಆಗಮಿಸುತ್ತಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿ, ರಸ್ತೆಯಿಂದ ಕೆಳಗೆ ಹಾರಿ, ಸುಮಾರು 25 ಅಡಿ ದೂರದಲ್ಲಿ ನಿಂತಿದೆ‌. ಅಪಘಾತದಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. 

ಗಾಯಾಳುವಿಗೆ ಸಕಲೇಶಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 


ಜಾಹೀರಾತು


Post a Comment

0 Comments