ಕಾಸರಗೋಡು: ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸುವಲ್ಲಿ ಕಾಂಗ್ರೆಸ್ ಮತ್ತು ಸಿಪಿಎಂ ಸೇರಿದಂತೆ ವಿರೋಧ ಪಕ್ಷಗಳ ನಿಲುವನ್ನು ಪ್ರತಿಭಟಿಸಿ, ಏಪ್ರಿಲ್ 29 ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ತಾಳಿಪಡ್ಪು ಮೈದಾನದಿಂದ ಮಹಿಳಾ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ನಂತರ ಹೊಸ ಬಸ್ ನಿಲ್ದಾಣದ ಸುತ್ತಮುತ್ತ ಸಾರ್ವಜನಿಕ ಸಭೆ ನಡೆಯಲಿದೆ.
ಬಿಜೆಪಿ-ಮೋರ್ಚಾ ರಾಜ್ಯ ಮತ್ತು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

0 Comments