ಪೆರ್ಲ : ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಮಾ.29ರಿಂದ ಆರಂಭಗೊಂಡಿದ್ದು ಏ.3ರ ವರೆಗೆ ಬ್ರಹ್ಮಶ್ರೀ ದೇಲಂಪಾಡಿ ಅನಿರುದ್ಧ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇದರ ಅಂಗವಾಗಿ ಇಂದು ಕ್ಷೇತ್ರದಲ್ಲಿ ಬೆಳಗ್ಗಿನ ಪೂಜೆ, ಬೆಳಗ್ಗೆ ಗಂಟೆ 10ಕ್ಕೆ ಶ್ರೀ ಬಲಿ, ಅಯ್ಯಂಗಾಯಿ ದರ್ಶನಬಲಿ, ನವಕಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ, ರಾತ್ರಿ 9ಕ್ಕೆ ಶ್ರೀ ಭೂತಬಲಿ, ಕಟ್ಟೆ ಪೂಜೆ, ರಥೋತ್ಸವ, ಬೆಡಿ, ದರ್ಶನ, ಶಯನ ಜರಗಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಏ.1ರಂದು ರಾತ್ರಿ 7.30 ರಿಂದ ಬಜಕೂಡ್ಲು ಶ್ರೀ ಮಹಾಲಿಂಗೇಶ್ವರ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ಏ.2ರಂದು ಬೆಳಗ್ಗೆ ಕವಾಟೋದ್ಘಾಟನೆ, ಜಲದ್ರೋಣಿ ಪೂಜೆ, ಅಭಿಷೇಕ, ಹಣ್ಣುಕಾಯಿ ಸಮರ್ಪಣೆ, ಯಾತ್ರಾ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ (ಮಧ್ಯಾಹ್ನ 1.30ರವರೆಗೆ), 1.30ಕ್ಕೆ ಶ್ರೀ ಬಲಿ, ಕಟ್ಟೆ ಪೂಜೆ, ಅವಭೃತ ಸ್ನಾನ, ದರ್ಶನಬಲಿ, ರಾಜಾಂಗಣದಲ್ಲಿ ಶ್ರೀಮುಡಿ ಗಂಧ ಪ್ರಸಾದ ವಿತರಣೆ, ಬಟ್ಟಲು ಅರ್ಪಣೆ, ಧ್ವಜಾವರೋಹಣ, ಮಂತ್ರಾಕ್ಷತೆ, ಏ.3ರಂದು ಬೆಳಗ್ಗೆ 9ಕ್ಕೆ ಶ್ರೀ ವ್ಯಾಘ್ರ ದೈವ (ಪಿಲಿಚಾಮುಂಡಿ) ನೇಮ ನಡೆಯಲಿದೆ.
ಏ. 2ರಂದು ಮಧ್ಯಾಹ್ನ 1.30ರಿಂದ ಶ್ರೀ ಶಾಸ್ತಾ ಮ್ಯೂಸಿಕಲ್ಸ್, ಪೆರ್ಲ - ಇವರಿಂದ ಭಕ್ತಿಸಂಗೀತ ಕಾರ್ಯಕ್ರಮ ನಡೆಯಲಿದೆ.
.jpeg)
0 Comments