Ticker

6/recent/ticker-posts

Ad Code

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ದಾರುಣ ಸಾವು

ಕರ್ನಾಟಕ : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.

ಮೃತ ಬಾಲಕಿಯನ್ನು ಅಂಕಿತಾ (9) ಎಂದು ಗುರುತಿಸಲಾಗಿದೆ. ಬಾಲಕಿ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ರಾಜೇಂದ್ರ ಹಾಗೂ ಭಾಗ್ಯಮ್ಮ ದಂಪತಿ ಮಗಳು ಎಂದು ತಿಳಿದುಬಂದಿದೆ. ಹೊಸಕೋಟೆಯಲ್ಲಿ ವಾಸವಾಗಿದ್ದ ಕುಟುಂಬ ಜಾತ್ರೆಗೆ ತೆರಳಿದ್ದು, ಭಾಗ್ಯಮ್ಮ ಸಂಬಂಧಿಕ ಮಹೇಶ್ ಎಂಬವರ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಮಕ್ಕಳೊಂದಿಗೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು. ಲಾರಿ ಒವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಹಾರಿ ಪಲ್ಟಿಯಾಗಿದೆ. ಈ ವೇಳೆ ಬಾಲಕಿ ಸಾವನ್ನಪ್ಪಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

0 Comments