ಮಂಗಳೂರು : ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದಲ್ಲಿ ಮಾವಿನ ಹಣ್ಣು ಕೊಯ್ಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅಲೆವೂರು ನಿವಾಸಿ ಸದಾನಂದ ದೇವಾಡಿಗ (55) ಮೃತಪಟ್ಟವರು. ಇವರು ಗ್ರಾಮ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಇಂದು(ಎ.24) ಬೆಳಿಗ್ಗೆ ಮಾವಿನ ಹಣ್ಣು ಕೊಯ್ಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಲೈನ್ ಸಂಪರ್ಕಕ್ಕೆ ಬಂದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ತುರ್ತು ಸೇವಾ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ರವಾನಿಸಲು ಸಹಾಯ ಮಾಡಿದರು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

0 Comments