Ticker

6/recent/ticker-posts

Ad Code

ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ : ಉದ್ಘಾಟನೆಗೆ ಮುನ್ನವೇ ಸರಣಿ ಅಪಘಾತ

 

ಲಕ್ನೋ : ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇಯ ಮೋಹಂದ್ ರೇಂಜ್‌ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ. ಎಲ್‌ಪಿಜಿ ಸಿಲಿಂಡರ್‌ ತುಂಬಿದ ಟ್ರಕ್‌ ಸೇರಿ  7 ವಾಹನಗಳು ಒಂದಕ್ಕೊಂದು ಢಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಉತ್ತರ ಪ್ರದೇಶದ ಸಹರಾನ್‌ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅಮಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್‌ಪಿಜಿ ತುಂಬಿದ್ದ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ರಭಸಕ್ಕೆ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.  ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು  ಆಸ್ಪತ್ರೆಗೆ ಸಾಗಿಸಿದ್ದಾರೆ.

ಉತ್ತರ ಪ್ರದೇಶದ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ವೇ ಏಪ್ರಿಲ್‌ 14 ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿದೆ. ಅಪಘಾತದ ಹೊರತಾಗಿಯೂ ನಾಳಿನ ಉದ್ಘಾಟನಾ ಸಮಾರಂಭ ನಿಗದಿಯಂತೆ ನಡೆಯಲಿದೆ. ಉದ್ಘಾಟನೆಗೂ ಮುನ್ನ ಪ್ರಧಾನಿಯವರು ಉತ್ತರಾಖಂಡದ  ದಾತ್ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ವೇಗಕ್ಕೆ ಮಿತಿ ಹೇರಲು ಮತ್ತು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎನ್‌ಎಚ್‌ಎಐ (NHAI) ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

Post a Comment

0 Comments