ಮಂಗಳೂರು : ದ.ಕ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ದೈವದ ಭಂಡಾರವನ್ನು ತಾಕೋಡೆ ಬರ್ಕೆ ಧರ್ಮನೇಮಕ್ಕೆ ಪಲ್ಲಕ್ಕಿಯಲ್ಲಿ ಹೊತ್ತು ಕೊಂಡೊಯ್ಯುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿದ್ದ ಸಂದರ್ಭದಲ್ಲಿ ಕಾಲುಸಂಕ (ಸಣ್ಣ ಸೇತುವೆ) ಏಕಾಏಕಿ ಕುಸಿದು ಪಲ್ಲಕ್ಕಿ ಉರುಳಿ ಬಿದ್ದಿದೆ. ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ (ಮಾರೂರು), ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೂ ಒಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯಾಗಿರುವುದಾಗಿ ವರದಿಯಾಗಿದೆ

0 Comments