Ticker

6/recent/ticker-posts

Ad Code

ಅಪಾರ ಜನ ಸ್ಪಂದನೆಯೊಂದಿಗೆ ಯಶಸ್ವಿಯಾದ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿಯ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

 

ಮಂಜೇಶ್ವರ : ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ಕೆ.ಎಸ್‌ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಸ್ಥಾಪಕಾಧ್ಯಕ್ಷರು, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಅಧ್ಯಕ್ಷರೂ ಆಗಿರುವ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಿದರು.  ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾದ ನಾರಾಯಣ ನೈಕ್ ನಡುಹಿತ್ಲು  ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದೇರಳಕಟ್ಟೆಯ ಕೆ.ಎಸ್‌ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞರಾದ ಡಾ. ಅಶ್ವಿನ್ ಶೆಟ್ಟಿ, ಇಮ್ಮಿಡಿಯೇಟ್ ಪಾಸ್ಟ್ ಡಯಾಟ್ರಿಕ್ಟ್ ಗವರ್ನರ್ ರೋಟರಿ ಡಿಸ್ಟ್ರಿಕ್ಟ್ ಡಾ. ವಿಕ್ರಮ್ ದತ್ತ ಭಾಗವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಡಾ‌. ಸತೀಶ್ ಭಂಡಾರಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಮೀಂಜ ಗ್ರಾಮ ಪಂಚಾಯತ್ ಸದಸ್ಯರಾದ ಶರ್ಮಿಳ ಎಂ ಶೆಟ್ಟಿ ಚಾರ್ಲ, ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸೌಮ್ಯ ಪಿ, ಡಾ. ಪುನೀತ ಶೆಟ್ಟಿ  ಕುಳೂರು, ಸೇವಾ ಬಳಗದ ಪಿ ಆರ್ ಓ ಕಾರ್ತಿಕ್ ಶೆಟ್ಟಿ ಮಜಿಬೈಲು, ಸೇವಾ ಬಳಗದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ  ಉಪಸ್ಥಿತರಿದ್ದರು.

ವೈದ್ಯಕೀಯ ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಇ.ಸಿ.ಜಿ., ಇ.ಎನ್.ಟಿ., ಜನರಲ್ ಮೆಡಿಸಿನ್ ಎಂಬೀ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆಯ ಜೊತೆಗೆ ಸೂಕ್ತ ಔಷಧಿ ಹಾಗೂ ಕನ್ನಡಕ ವಿತರಣೆ ಮಾಡಲಾಯಿತು.

ರಕ್ತದಾನ ಶಿಬಿರದಲ್ಲಿ 80 ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ರಕ್ತದಾನ ಮಾಡಿದ ರಕ್ತದಾನಿಗಳಿಗೆ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನರವರು ನಗದು ಹಾಗೂ ಮೋಹನ್ ಶೆಟ್ಟಿ ಮಜ್ಜಾರ್ ರವರ ವತಿಯಿಂದ ವಿಶೇಷ ಗಿಫ್ಟ್ ನೀಡಿ ಅಭಿನಂದಿಸಲಾಯಿತು. ಸೇವಾ ಬಳಗದ ಕೋಶಾಧಿಕಾರಿ ಮೀರಾ ಆಳ್ವ ಸ್ವಾಗತಿಸಿ, ದೇವಿ ಪ್ರಸಾದ್ ಶೆಟ್ಟಿ ವಂದಿಸಿದರು.  ಪ್ರಶಾಂತ್ ಕೆ.ಪಿ ನಿರೂಪಿಸಿದರು. 

Post a Comment

0 Comments