ಮಂಜೇಶ್ವರ : ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಇದೇ ಬರುವ ಎಪ್ರಿಲ್ 19 ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.
ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಮುಂಬೈ ಇದರ ಸ್ಥಾಪಕಾಧ್ಯಕ್ಷರು, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಅಧ್ಯಕ್ಷರೂ ಆಗಿರುವ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾದ ನಾರಾಯಣ ನೈಕ್ ನಡುಹಿತ್ಲು ವಹಿಸುವರು. ಮುಖ್ಯ ಅತಿಥಿಗಳಾಗಿ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞರಾದ ಡಾ. ಅಶ್ವಿನ್ ಶೆಟ್ಟಿ, ಇಮ್ಮಿಡಿಯೇಟ್ ಪಾಸ್ಟ್ ಡಯಾಟ್ರಿಕ್ಟ್ ಗವರ್ನರ್ ರೋಟರಿ ಡಿಸ್ಟ್ರಿಕ್ಟ್ ಡಾ. ವಿಕ್ರಮ್ ದತ್ತ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರೀಯ ಸಮಿತಿಯ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಮೀಂಜ ಗ್ರಾಮ ಪಂಚಾಯತ್ ಸದಸ್ಯರಾದ ಶರ್ಮಿಳ ಎಂ ಶೆಟ್ಟಿ ಚಾರ್ಲ, ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ, ಡಾ. ಪುನೀತ ಶೆಟ್ಟಿ ಕುಳೂರು ಉಪಸ್ಥಿತರಿರುವರು.
ವೈದ್ಯಕೀಯ ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ, ಮಕ್ಕಳ ಚಿಕಿತ್ಸೆ, ಇ.ಸಿ.ಜಿ., ಇ.ಎನ್.ಟಿ., ಜನರಲ್ ಮೆಡಿಸಿನ್ ಎಂಬೀ ವಿಭಾಗಗಳಲ್ಲಿ ನುರಿತ ತಜ್ಞರಿಂದ ತಪಾಸಣೆಯ ಜೊತೆಗೆ ಸೂಕ್ತ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಲು ಕರೆ ನೀಡಲಾಗಿದೆ.

0 Comments